- Advertisement -
- Advertisement -
ಉಳ್ಳಾಲ: ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಜ.23 ಗುರುವಾರದಂದು ಸಿಸಿಬಿ ಪೊಲೀಸರ ತಂಡದೊಂದಿಗೆ ಜಿಲ್ಲಾ 4ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಉಳ್ಳಾಲ ಪೊಲೀಸರಿಂದ ಆರೋಪಿಗಳಾದ ಮುರುಗನ್ ದೇವರ್ ಹಾಗೂ ರಾಜೇಂದ್ರನ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿಜ.17ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಪೊಲೀಸರು ಬಂಧಿಸಿದ್ದರು. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದ್ದೆ ಎನ್ನಲಾಗಿದೆ.
- Advertisement -