Wednesday, June 24, 2026
Homeತಾಜಾ ಸುದ್ದಿಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ವಿಸರ್ಜನೆ

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ವಿಸರ್ಜನೆ

- Advertisement -
- Advertisement -

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತರ ಘಟಕವನ್ನು ವಿಸರ್ಜಿಸಲಾಗಿದೆ. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿದ್ದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕವನ್ನು ವಿಸರ್ಜನೆ ಮಾಡಿದ್ದಾರೆ.

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ.

ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶೀಘ್ರದಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ರಚನೆಯಾಗಲಿದ್ದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವಿಚಾರವಾಗಿ ಕಾಂಗ್ರೆಸ್ ಪಕ಼ದಲ್ಲಿನ ಮುಸ್ಲಿಂ ಮುಖಂಡರ ಅಸಮಾಧಾನದ ಬಳಿಕ ಈ ಬೆಳವಣಿಗೆ ನಡೆದಿದೆ.

- Advertisement -

Latest News

error: Content is protected !!