Wednesday, June 24, 2026
Homeತಾಜಾ ಸುದ್ದಿವಿಧಾನಸೌಧದಲ್ಲಿ ಮ್ಯಾಟ್ ಹಾಸಿ ನಿದ್ದೆ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ವಿಧಾನಸೌಧದಲ್ಲಿ ಮ್ಯಾಟ್ ಹಾಸಿ ನಿದ್ದೆ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

- Advertisement -
- Advertisement -

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ ವಿಧಾನಸೌಧದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಹೀಗಾಗಿ ಪ್ರತಿಭಟನಾ ಸ್ಥಳಕ್ಕೆ ವೈದ್ಯರು ಆಗಮಿಸಿ ಪರೀಕ್ಷೆ ನಡೆಸಿದ್ದಾರೆ. ಹೊಟ್ಟೆ ನೋವಿನ ಕಾರಣ ಆಯಾಸಗೊಂಡಿದ್ದ ಡಿ.ಕೆ. ಶಿವಕುಮಾರ್ ಪ್ರತಿಭಟನಾ ಸ್ಥಳದಲ್ಲೇ ನಿದ್ರೆಗೆ ಜಾರಿದ್ದಾರೆ. ವಿಧಾನಸೌಧದ ಪೂರ್ವ ದ್ವಾರದಲ್ಲಿ ನೆಲದ ಮೇಲೆ ಮ್ಯಾಟ್ ಹಾಸಿ ಅದರ ಮೇಲೆಯೇ ನಿದ್ದೆ ಮಾಡಿದ್ದಾರೆ.

- Advertisement -

Latest News

error: Content is protected !!