Sunday, June 7, 2026
Homeಕರಾವಳಿಉಡುಪಿಆತ್ಮಹತ್ಯೆ ಮಾಡಿಕೊಂಡ ಉಪ್ಪಿನಂಗಡಿಯ ಎಂಬಿಎ ಪದವೀಧರೆ ಸಹನಾ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಂತ್ವನ

ಆತ್ಮಹತ್ಯೆ ಮಾಡಿಕೊಂಡ ಉಪ್ಪಿನಂಗಡಿಯ ಎಂಬಿಎ ಪದವೀಧರೆ ಸಹನಾ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಂತ್ವನ

- Advertisement -
- Advertisement -

ಬೆಂಗಳೂರು: ಉಡುಪಿ ಜಿಲ್ಲೆಯ ಶಿರ್ವದಲ್ಲಿ 23 ವರ್ಷದ ಎಂಬಿಎ ಪದವೀಧರೆ ಸಹನಾ ಆತ್ಮಹತ್ಯೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮೂಲಕ ಕುಟುಂಬಕ್ಕೆ ಸಾಂತ್ವನ ಹೇಳಿರುವ ಶಿವಕುಮಾರ್, ಆತ್ಮಹತ್ಯೆಯ ವಿಷಯ ತಿಳಿದು ದು:ಖವಾಗಿದೆ, ಸಹನಾ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಎಂಬಿಎ ಪದವಿ ಪಡೆದರೂ ಸೂಕ್ತ ಕೆಲಸ ದೊರೆಯದೇ ಆಕೆ ಸಾವಿಗೆ ಶರಣಾಗಿದ್ದು, ನಾವು ಎಲ್ಲಿ ಎಡವುತ್ತಿದ್ದೇವೆ ಎಂದು ಸಮಾಜದ ಒಂದು ಭಾಗವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದರೆ ಖಂಡಿತವಾಗಿಯೂ ನಾವು ತಪ್ಪು ಹೆಜ್ಜೆ ಇಡುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಉಡುಪಿ ಜಿಲ್ಲೆಯ ಶಿರ್ವದಲ್ಲಿ ಉಪ್ಪಿನಂಗಡಿ ಮೂಲದ ಎಂಬಿಎ ಪದವೀಧರೆ ಸಹನಾ ಕೆಲಸ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದರು.

- Advertisement -

Latest News

error: Content is protected !!