Tuesday, May 28, 2024
Homeಕರಾವಳಿಕೆಪಿಸಿಸಿ ಜಾಲತಾಣ ಸಮನ್ವಯ ಸಮಿತಿಯಲ್ಲಿ ದ.ಕ. ಜಿಲ್ಲೆಯ ಇಬ್ಬರು ಮಹಿಳೆಯರಿಗೆ ಅವಕಾಶ

ಕೆಪಿಸಿಸಿ ಜಾಲತಾಣ ಸಮನ್ವಯ ಸಮಿತಿಯಲ್ಲಿ ದ.ಕ. ಜಿಲ್ಲೆಯ ಇಬ್ಬರು ಮಹಿಳೆಯರಿಗೆ ಅವಕಾಶ

spot_img
- Advertisement -
- Advertisement -

ಮಂಗಳೂರು, ಮೇ 7: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಸಾಮಾಜಿಕ ಜಾಲತಾಣ ಸಮನ್ವಯ ಸಮಿತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರು ನಿಯೋಜಿತರಾಗಿದ್ದಾರೆ.

ಸಮಿತಿಗೆ ಹೆಚ್ಚುವರಿಯಾಗಿ ಒಂಬತ್ತು ಸದಸ್ಯರನ್ನು ಆಯ್ಕೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದು, ಇದರಲ್ಲಿ ದ.ಕ. ಜಿಲ್ಲೆಯಿಂದ ಲಾವಣ್ಯಾ ಬಲ್ಲಾಳ್ ಮತ್ತು ಶೇರಿಲ್ ಅಯೋನ ಸೇರಿದ್ದಾರೆ.
ಲಾವಣ್ಯಾ ಬಲ್ಲಾಳ್ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದು, ಹಲವಾರು ವರ್ಷಗಳಿಂದ ಮಹಿಳಾ ಕಾಂಗ್ರೆಸ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವವಿಯಾಗಿದ್ದಾರೆ. ಶೆರಿಲ್ ಅಯೋನ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದು, ರಾಜ್ಯಮಟ್ಟದ ಮಹಿಳಾ ಕಾಂಗ್ರೆಸ್ಸಿನ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾಗಿಯು ಕರ್ತವ್ಯ ನಿರ್ವಹಿಸಿದ ಅನುಭವವಿಯಾಗಿದ್ದಾರೆ.
ಇವರ ಕಾರ್ಯಕ್ಷಮತೆಯನ್ನು ಗುರುತಿಸಿ ಕೆಪಿಸಿಸಿ ಅಧ್ಯಕ್ಷರು ಸೂಕ್ತ ಸ್ಥಾನ ಕಲ್ಪಿಸಿರುವುದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಹೆಮ್ಮೆಯ ವಿಷಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!