Wednesday, July 2, 2025
Homeಕರಾವಳಿಉಡುಪಿಉಡುಪಿಯಲ್ಲಿ ನಾಳೆ ಕೃಷ್ಣ ಜನ್ಮಾಷ್ಟಮಿ – ಸಾರ್ವಜನಿಕರಿಗಿಲ್ಲ ದರ್ಶನ ಭಾಗ್ಯ

ಉಡುಪಿಯಲ್ಲಿ ನಾಳೆ ಕೃಷ್ಣ ಜನ್ಮಾಷ್ಟಮಿ – ಸಾರ್ವಜನಿಕರಿಗಿಲ್ಲ ದರ್ಶನ ಭಾಗ್ಯ

spot_img
- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಗುರುವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ. ಕೃಷ್ಣನ ಜನ್ಮಾಷ್ಟಮಿ ನಂತರದ ಶುಕ್ರವಾರ ರಥಬೀದಿಯಲ್ಲಿ ವಿಟ್ಲಪಿಂಡಿ ಮಹೋತ್ಸವ ನಡೆಯಲಿದೆ. ಆದರೆ ಎರಡೂ ದಿನದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಅವಕಾಶ ಇಲ್ಲ.

ಸೆಪ್ಟೆಂಬರ್ 21ರವರೆಗೆ ನೂರು ಜನ ಸೇರುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹೀಗಾಗಿ ಉಡುಪಿ ಕೃಷ್ಣಮಠ ಕೋವಿಡ್ 19 ನ ಹಿಂದಿನ ಸೂಚನೆಯನ್ನೇ ಪಾಲಿಸಬೇಕಾಗುತ್ತದೆ. ರಥಬೀದಿಯಲ್ಲಿ ಸಾವಿರಾರು ಜನ ಸೇರಿ ಆಚರಿಸುವ ವಿಟ್ಲಪಿಂಡಿ ಆಚರಣೆಗೆ ಕೂಡ ನೂರು ಜನ ಸೇರುವ ಅವಕಾಶವೂ ಇಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ವೇಷ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವಕಾಶ ಇಲ್ಲ. ಪೊಲೀಸ್ ನಿಯೋಜನೆ ಮಾಡಿ ಸಾರ್ವಜನಿಕ ಪಾಲ್ಗೊಳ್ಳುವಿಕೆಗೆ ಅವಕಾಶ ಕೊಡುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!