- Advertisement -
- Advertisement -
ಪುತ್ತೂರು: ಸಹಪಾಠಿಯಿಂದಲೇ ವಿದ್ಯಾರ್ಥಿನಿ ತಾಯಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 10 ದಿನಗಳಿಂದ ಆರೋಪಿ ಕೃಷ್ಣ ಜೆ ರಾವ್ ತಲೆ ಮರೆಸಿಕೊಂಡಿದ್ದ. ನಿನ್ನೆ(ಜುಲೈ 4ರಂದು) ಆತನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದಿದ್ದರು. ಅದರಂತೆ ಆತ ತಲೆ ಮರೆಸಿಕೊಳ್ಳಲು ಸಹಕರಿಸಿದ ಆತನ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಬೆನ್ನಲ್ಲೇ ಅವರಿಗೆ ಜಾಮೀನು ಮಂಜೂರಾಗಿದೆ.
- Advertisement -