Wednesday, June 3, 2026
Homeತಾಜಾ ಸುದ್ದಿಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಶಾಸಕರಿಗೆ ಐಪಿಎಲ್ ಪಂದ್ಯಗಳಿಗೆ 3, ಅಂತಾರಾಷ್ಟ್ರೀಯ ಪಂದ್ಯಗಳಿಗೆ 2 ಟಿಕೆಟ್ ನೀಡಲು...

ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಶಾಸಕರಿಗೆ ಐಪಿಎಲ್ ಪಂದ್ಯಗಳಿಗೆ 3, ಅಂತಾರಾಷ್ಟ್ರೀಯ ಪಂದ್ಯಗಳಿಗೆ 2 ಟಿಕೆಟ್ ನೀಡಲು ತೀರ್ಮಾನ

- Advertisement -
- Advertisement -

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಗಳಲ್ಲಿ ಶಾಸಕರಿಗೆ ಮೂರು ಟಿಕೆಟ್ ಗಳನ್ನು ನೀಡಲು ಕೆಎಸ್ ಸಿಎ ಮತ್ತು ಡಿಎನ್ಎ ಒಪ್ಪಿಗೆ ಸೂಚಿಸಿವೆ.

ಬೆಂಗಳೂರಿನ ಸದಾಶಿವನಗರದಲ್ಲಿ ಇಂದು ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಖಾಸಗಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ‌.

ಐಪಿಎಲ್ ಪಂದ್ಯಗಳಿಗೆ ಮೂರು ಟಿಕೆಟ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಶಾಸಕರಿಗೆ ಎರಡು ಟಿಕೆಟ್ ಗಳನ್ನು ನೀಡಲು ಕೆಎಸ್ ಸಿಎ ಮತ್ತು ಡಿಎನ್ ಎ ಸಹಮತಿಸಿವೆ. ಉಳಿದ ಟಿಕೆಟ್ ಗಳನ್ನು ಶಾಸಕರು ಖರೀದಿ ಮಾಡಬೇಕೆಂಬ ತೀರ್ಮಾನಕ್ಕೆ ಬರಲಾಗಿದೆ.

ಡಿಸಿಎಂ ನಿವಾಸದಲ್ಲಿ ನಡೆದ ಸಭೆಯಲ್ಲಿ ಕೆಎಸ್ ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಕೆಎಸ್ ಸಿಎ ಹಾಗೂ ಡಿಎನ್ಎ ಪದಾಧಿಕಾರಿಗಳು ಭಾಗವಹಿಸಿದ್ದರು.

ವಿಧಾನಸಭೆಯಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಶಾಸಕರಿಗೆ ಐದು ಟಿಕೆಟ್ ನೀಡಲು ಬೇಡಿಕೆ ಇಟ್ಟ ಕಾರಣ ಸಭೆ ನಡೆಸುವಂತೆ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದ್ದರು.

- Advertisement -

Latest News

error: Content is protected !!