Sunday, June 7, 2026
Homeಕರಾವಳಿಕಾಸರಗೋಡುಕಾಸರಗೋಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಅಪಘಾತ; 16 ಕ್ಕೂ ಹೆಚ್ಚು...

ಕಾಸರಗೋಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಅಪಘಾತ; 16 ಕ್ಕೂ ಹೆಚ್ಚು ಮಂದಿಗೆ ಗಾಯ

- Advertisement -
- Advertisement -

ಕಾಸರಗೋಡು; ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಅಪಘಾತವಾದ ಪರಿಣಾಮ 16 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಜೇಶ್ವರ ಪೊಸೋಟ್ ಬಳಿ‌ ನಡೆದಿದೆ.
ಸರಿ ಸುಮಾರು 35 ಕ್ಕೂ ಅಧಿಕ ಪ್ರಯಾಣಿಕರಿದ್ದ ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಬಸ್ ಪೊಸೋಟ್ ಪೆಟ್ರೋಲ್ ಪಂಪ್ ಬಳಿ ಅಪಘಾತ ಸಂಭವಿಸಿದೆ.

ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು, ಪೊಲೀಸರು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 15 ಮಂದಿಯನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!