Wednesday, October 14, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಕೆಎಸ್ ಆರ್ ಟಿಸಿ ಬಸ್ ಟೈಯರ್ ಸ್ಫೋಟಗೊಂಡು ಡಿವೈಡರ್ ಗೆ ಡಿಕ್ಕಿ, ಮೂವರಿಗೆ ಗಂಭೀರ...

ಉಪ್ಪಿನಂಗಡಿ; ಕೆಎಸ್ ಆರ್ ಟಿಸಿ ಬಸ್ ಟೈಯರ್ ಸ್ಫೋಟಗೊಂಡು ಡಿವೈಡರ್ ಗೆ ಡಿಕ್ಕಿ, ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಉಪ್ಪಿನಂಗಡಿ; ಕೆಎಸ್ ಆರ್ ಟಿಸಿ ಬಸ್ ಟೈಯರ್ ಸ್ಫೋಟಗೊಂಡು ಡಿವೈಡರ್ ಗೆ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿ 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್‍ಪಿ ಪೆಟ್ರೋಲ್ ಪಂಪ್‍ನ ಮುಂಭಾಗದಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ದಂಪತಿ ಬಸ್ಸಿನಲ್ಲಿದ್ದ ಚಂದ್ರು (68), ಅವರ ಪತ್ನಿ ಸರೋಜ(60)ಹಾಗೂ ಇನ್ನೊಬ್ಬರು ಪ್ರಯಾಣಿಕರು ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ.


ಕುಂದಾಪುರ ಡಿಪೋಗೆ ಸೇರಿದ ಕೆಎಸ್ಸಾರ್ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಸ್ಸಿನ ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಡಿವೈಡರ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದಂತೆ ಬಸ್ಸಿನ ಚಾಲಕ ಸಹಿತ 10 ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

- Advertisement -

Latest News

error: Content is protected !!