Thursday, June 4, 2026
Homeಕರಾವಳಿಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಪಿಕಪ್...

ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಪಿಕಪ್ ಚಾಲಕ ಸಾವು

- Advertisement -
- Advertisement -

ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಪಿಕಪ್ ಚಾಲಕ ಸಾವನ್ನಪ್ಪಿರುವ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ನಡೆದಿದೆ.
ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ ( 43) ಮೃತ ದುರ್ದೈವಿ. ಕೆಎಸ್ಆರ್ ಟಿಸಿ ಬಸ್ ನ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಪಿಕಪ್ ಡ್ರೈವರ್ ಮುಸ್ತಫಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಪಿಕಪ್ ವ್ಯಾನ್ ನಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದು, ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -

Latest News

error: Content is protected !!