Thursday, June 4, 2026
Homeಕರಾವಳಿಅಧಿಕಾರಿಗಳ ಕಿರುಕುಳ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ KSRTC ಕಂಡೆಕ್ಟರ್

ಅಧಿಕಾರಿಗಳ ಕಿರುಕುಳ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ KSRTC ಕಂಡೆಕ್ಟರ್

- Advertisement -
- Advertisement -

ಉಳ್ಳಾಲ : ಆರ್ಥಿಕ ಮುಗ್ಗಟ್ಟು, ಅಧಿಕಾರಿಗಳ ಕಿರುಕುಳ, ಮಾನಸಿಕ ಹಿಂಸೆ, ಅತಿಯಾದ ಒತ್ತಡ, ಕೌಟುಂಬಿಕ ಕಲಹ, ಮಗುವಿನ ಅನಾರೋಗ್ಯದಿಂದ ಬೆಸೆತ್ತು ಕೆಎಸ್‌ಆರ್ ಟಿಸಿ ಚಾಲಕ/ನಿರ್ವಾಹಕರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಡೆದಿದೆ.

ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು, ಇವರು ಆತ್ಮಹತ್ಯೆಗೆ ಮೊದಲು ಡೆತ್ ನೋಟ್‌ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಲಕೃಷ್ಣರ ಜತೆ ಸಿಕ್ಕಿರುವ ಡೆತ್ ನೋಟ್ ನಲ್ಲಿ ತನ್ನ ಸಹೋದರ ಮತ್ತು ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದು, KSRTC ಸಂಸ್ಥೆಯಲ್ಲಿ ತಮಗಾಗುತ್ತಿದ್ದ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ, ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿರುವ ಅವರು , ನನ್ನ ಮಕ್ಕಳು ಹಾಗು ತಾಯಿಯನ್ನು ಒಳ್ಳೆಯ ರೀತಿಯಲ್ಲಿ ನೋಡಿಕೊಳ್ಳಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!