Sunday, June 7, 2026
Homeತಾಜಾ ಸುದ್ದಿಪುತ್ತೂರು: ಕರ್ತವ್ಯನಿರ್ವಹಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ನಿಯಂತ್ರಣಾಧಿಕಾರಿಗೆ ಪ್ರಯಾಣಿಕನಿಂದ ಹಲ್ಲೆ

ಪುತ್ತೂರು: ಕರ್ತವ್ಯನಿರ್ವಹಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ನಿಯಂತ್ರಣಾಧಿಕಾರಿಗೆ ಪ್ರಯಾಣಿಕನಿಂದ ಹಲ್ಲೆ

- Advertisement -
- Advertisement -

ಪುತ್ತೂರು: ಕರ್ತವ್ಯನಿರ್ವಹಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ನಿಯಂತ್ರಣಾಧಿಕಾರಿಗೆ ಪ್ರಯಾಣಿಕನೋರ್ವ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗುರುವಾರದಂದು ಸಂಜೆ ನಡೆದಿದೆ.

ಹಲ್ಲೆಗೊಳಗಾದವರನ್ನು ಸಂಚಾರ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಎಂದು ಗುರುತಿಸಲಾಗಿದೆ. ಇವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕರ್ತವ್ಯ ನಿರತರಾಗಿದ್ದ ವೇಳೆ ಪ್ರಯಾಣಿಕನೋರ್ವ ಕಾಂಞಂಗಾಡಿಗೆ ಹೋಗುವ ಕೇರಳ ಬಸ್ ನ ಮಾಹಿತಿ ಕೇಳಿದ್ದು, ಅದರಂತೆ ಮಾಹಿತಿ ನೀಡಿದ್ದೆ. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದ ಆತ ನನಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Latest News

error: Content is protected !!