Thursday, June 4, 2026
Homeತಾಜಾ ಸುದ್ದಿಪಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಕೆಎಸ್ಆರ್ ಟಿಸಿ ಬಸ್ ನಲ್ಲಿ ಉಚಿತ...

ಪಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಕೆಎಸ್ಆರ್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

- Advertisement -
- Advertisement -

ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಗೆ ತೆರಳೋದಕ್ಕೆ, ಬರೆದು ವಾಪಾಸ್ ಪರೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಏ.22ರಿಂದ ಆರಂಭಗೊಳ್ಳುತ್ತಿರುವಂತ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೂ ಇದೇ ಅವಕಾಶವನ್ನು ನೀಡಿದೆ.

ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಬೇಕಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುಲು ಅನುಮತಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕೋರಿದ್ದಾರೆ.

- Advertisement -

Latest News

error: Content is protected !!