Sunday, October 18, 2026
Homeಚಿಕ್ಕಮಗಳೂರುಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್‌ನ ಟಯರ್

ಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್‌ನ ಟಯರ್

- Advertisement -
- Advertisement -

ಚಿಕ್ಕಮಗಳೂರು: ಚಲಿಸುತ್ತಿದ್ದ KSRTC ಬಸ್‌ನ ಟಯರ್ ಏಕಾಏಕಿ ಕಳಚಿ ಬಿದ್ದ ಪರಿಣಾಮ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ನಡೆದಿದೆ.

ಶೃಂಗೇರಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಶಿವಮೊಗ್ಗ ಡಿಪೋಗೆ ಸೇರಿದ KSRTC ಬಸ್ ಚಲಿಸುತ್ತಿದ್ದ ವೇಳೆ ಟಯರ್ ಕಳಚಿ ಬಿದ್ದಿದೆ. ಇದರಿಂದ ಆತಂಕಗೊಂಡ ಪ್ರಯಾಣಿಕರು ಬಸ್‌ನಿಂದ ಇಳಿದು ನಡು ರಸ್ತೆಯಲ್ಲೇ ಕುಳಿತುಕೊಂಡ ಘಟನೆ ನಡೆದಿದೆ.

ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!