Sunday, May 12, 2024
Homeಕರಾವಳಿಕೆಎಸ್‌ಆರ್ಟಿಸಿ ಮಂಗಳೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ಪ್ರಮುಖ ದೇಗುಲ ದರ್ಶನಕ್ಕೆ ದಸರಾ ಟೂರ್‌...

ಕೆಎಸ್‌ಆರ್ಟಿಸಿ ಮಂಗಳೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ಪ್ರಮುಖ ದೇಗುಲ ದರ್ಶನಕ್ಕೆ ದಸರಾ ಟೂರ್‌ ಪ್ಯಾಕೇಜ್‌

spot_img
- Advertisement -
- Advertisement -

ಬೆಂಗಳೂರು : ದಸರಾ ಸಂದರ್ಭದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ದೇಗುಲಗಳಿಗೆ ಭೇಟಿ ನೀಡುವ ಪ್ಲ್ಯಾನ್ ನಲ್ಲಿರುವ ಮಂದಿಗೆ ಕೆಎಸ್ ಆರ್ ಟಿಸಿ ಭರ್ಜರಿ ಸುದ್ದಿಯೊಂದನ್ನು ನೀಡಿದೆ. ಕೆಎಸ್‌ಆರ್ಟಿಸಿ ಮಂಗಳೂರು ವಿಭಾಗವು ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ಪ್ರಮುಖ ದೇವಾಲಯಗಳ ದರ್ಶನಕ್ಕಾಗಿ ದಸರಾ ಟೂರ್ ಪ್ಯಾಕೇಜ್ ಅನ್ನು ಘೋಷಣೆ ಮಾಡಲಾಗಿದೆ .

ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನವರಾತ್ರಿ ಉತ್ಸವದ ಎಲ್ಲಾ ದಿನಗಳಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್ ಅನ್ನು ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ ನಿರ್ವಹಿಸಲಿದೆ.

ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ನವರಾತ್ರಿಯ ಸಮಯದಲ್ಲಿ ಕರಾವಳಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಟಿಕೆಟ್ ಕಾಯ್ದಿರಿಸಬಹುದು ಮತ್ತು ಭೇಟಿ ನೀಡಬಹುದು ಎಂದು ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಗುರುಪುರದ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಮತ್ತು ಕಡಲತೀರಕ್ಕೆ ಪ್ರಯಾಣಿಕರನ್ನು ಕರೆದೊಯ್ಯಲಾಗುವುದು.

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವ ಶ್ರೀ ಮರಿಯಮ್ಮ ದೇವಾಲಯ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯಗಳಿಗೆ ತೆರಳಿ ನವದುರ್ಗೆಯರ ವಿಗ್ರಹಗಳನ್ನು ವೀಕ್ಷಿಸಬಹುದುದಾಗಿದೆ.

ಇನ್ನು ವಯಸ್ಕರಿಗೆ ₹ 300 ಮತ್ತು ಮಕ್ಕಳಿಗೆ ₹ 250 ಶುಲ್ಕ ವಿಧಿಸಲಾಗಿದೆ. ನವರಾತ್ರಿ ಉತ್ಸವದ ಸಂದರ್ಭದಲ್ಲಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ಕೆಎಸ್‌ಆರ್ಟಿಸಿ ಇಂತಹ ಪ್ಯಾಕೇಜ್ ಅನ್ನು ಪರಿಚಯಿಸುತ್ತಿದೆ . ಬೆಳಿಗ್ಗೆ 8 ರಿಂದ ರಾತ್ರಿ 8.30 ರವರೆಗೆ ಒಂದು ದಿನದ ಪ್ರವಾಸವು ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರಾರಂಭವಾಗಲಿದೆ. ನಿಗಮವು ಜನರ ಪ್ರತಿಕ್ರಿಯೆಯನ್ನು ಅವಲಂಬಿಸಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಬಸ್ ಗಳನ್ನು ಓಡಿಸಲು ಯೋಜಿಸಿದೆ

- Advertisement -
spot_img

Latest News

error: Content is protected !!