Thursday, June 4, 2026
Homeತಾಜಾ ಸುದ್ದಿಪ್ರಯಾಣಿಕರ ಗಮನಕ್ಕೆ: ನಾಳೆ KSRTC ನೌಕರರ ಧರಣಿ, ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಪ್ರಯಾಣಿಕರ ಗಮನಕ್ಕೆ: ನಾಳೆ KSRTC ನೌಕರರ ಧರಣಿ, ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ಬೆಂಗಳೂರು: ರಾಜ್ಯದ ಎಲ್ಲಾ ಸಾರಿಗೆ ನೌಕರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ನಾಳೆ ರಾಜ್ಯದಲ್ಲಿ ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು. ಸರ್ಕಾರಿ ನೌಕರರಿಗೆ ನೀಡುವಂತಹ ಸವಲತ್ತುಗಳನ್ನು ಸಾರಿಗೆ ನೌಕರರಿಗೂ ನೀಡಬೇಕು. ಕೊರೋನಾ ಸಂದರ್ಭದಲ್ಲಿ ಮೃತಪಟ್ಟ ಸಾರಿಗೆ ನೌಕರರಿಗೆ ಘೋಷಣೆ ಮಾಡಿದ್ದ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ನಾಳೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಎಸ್‌ಆರ್ಟಿಸಿ, ಬಿಎಂಟಿಸಿ ಹಾಗೂ ಎನ್‌ಇಕೆಆರ್ಟಿಸಿ ಸೇರಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಸಾರಿಗೆ ನೌಕರರು ಇದ್ದಾರೆ.

ಈ ಮಧ್ಯೆ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ನವೆಂಬರ್ ವರೆಗಿನ ಎಲ್ಲಾ ವೇತನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವುದರಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!