- Advertisement -
- Advertisement -
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮಂಗಳೂರು ವಿಭಾಗವು ಉಡುಪಿ–ಮಂಗಳೂರು ನಡುವೆ 10 ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಲು ಸಿದ್ಧತೆ ನಡೆಸಿದ್ದು, ಇದೀಗ ಸದ್ಯಕ್ಕೆ ಎರಡು ಬಸ್‌ಗಳು ಸೇವೆ ಒದಗಿಸುತ್ತಿವೆ ಎಂದು ಮಾಹಿತಿ ಲಭ್ಯವಾಗಿದೆ.
ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಈ ಕುರಿತಂತೆ ಮಾಹಿತಿ ನೀಡಿದ್ದು, ಮಂಗಳೂರು ವಲಯಕ್ಕೆ 45 ಎಲೆಕ್ಟ್ರಿಕ್ ಬಸ್‌ಗಳ ಸೇವೆ ಮಂಜೂರಾಗಿದ್ದು, ಸದ್ಯ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇವೆಲ್ಲವುಗಳ ಪ್ರಕ್ರಿಯೆ ಬೇಗ ಮುಗಿಯುತ್ತಿದ್ದಂತೆ, ಎಲೆಕ್ಟ್ರಿಕ್ ಬಸ್ ಸಂಚಾರ ಈ ಮಾರ್ಗದಲ್ಲಿ ಸಂಚರಿಸಲಿದೆ ಎಂದರು.
ಇನ್ನು ಎಲೆಕ್ಟ್ರಿಕ್ ಬಸ್‌ನಲ್ಲಿ 45 ಆಸನಗಳಿದ್ದು, ಬಸ್ ನಲ್ಲಿ 60ರಿಂದ 70 ಮಂದಿವರೆಗೂ ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.
- Advertisement -