Friday, May 3, 2024
Homeಉದ್ಯಮಗುಡ್ ನ್ಯೂಸ್ : ಕೆಎಸ್‌ಆರ್‌ಟಿಸಿ ಬಸ್ಸುಗಳ ರಾತ್ರಿ ಸಂಚಾರ ಪ್ರಾರಂಭ..!

ಗುಡ್ ನ್ಯೂಸ್ : ಕೆಎಸ್‌ಆರ್‌ಟಿಸಿ ಬಸ್ಸುಗಳ ರಾತ್ರಿ ಸಂಚಾರ ಪ್ರಾರಂಭ..!

spot_img
- Advertisement -
- Advertisement -

ಬೆಂಗಳೂರು: ಲಾಕ್ ಡೌನ್ ಜಾರಿಯಲ್ಲಿದ್ದರೂ ಬಸ್ ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ನಿಗದಿತ ಸಂಖ್ಯೆಯ ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶ ಸೇರಿ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಈಗಾಗಲೇ ರಾಜ್ಯದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಈ ಮೊದಲೇ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಲು ಬಸ್ ಸಂಚಾರ ಆರಂಭಿಸಲಾಗಿತ್ತು. ಕಳೆದ ವಾರದಿಂದ ರಾಜ್ಯದಲ್ಲಿ ಬಸ್ ಸಂಚಾರ ಹಂತ ಹಂತವಾಗಿ ಆರಂಭವಾಗುತ್ತಿದೆ. ಇನ್ನು ಮುಂದೆ ರಾತ್ರಿ ವೇಳೆಯಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಪ್ರಯಾಣಿಕರ ಲಭ್ಯತೆ ಆಧರಿಸಿ ಶೀಘ್ರದಲ್ಲಿಯೇ ಬಸ್ಸುಗಳ ರಾತ್ರಿ ಸಂಚಾರವನ್ನೂ ಕೂಡ ಪುನರಾರಂಭಿಸಲಾಗುವುದು. ಕೋವಿಡ್ ಲಾಕ್ ಡೌನ್ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದ ಎಲ್ಲಾ ನಾಲ್ಕು ಸಾರಿಗೆ ನಿಗಮಗಳು 1700 ಕೋಟಿ ರೂ.ನಷ್ಟ ಅನುಭವಿಸಿವೆ.

ರಾಜ್ಯದ 4 ನಿಗಮಗಳಲ್ಲಿ ಒಟ್ಟು ಸುಮಾರು 1,30,000 ಸಿಬ್ಬಂದಿ ವರ್ಗದವರಿದ್ದಾರೆ.ಎಪ್ರಿಲ್ ತಿಂಗಳ ವೇತನಕ್ಕೆ ಸರ್ಕಾರ ಅನುದಾನ ನೀಡಿದೆ.ಮೇ ತಿಂಗಳ ವೇತನಕ್ಕೆ ಅರ್ಧದಷ್ಟು ಅನುದಾನ ನೀಡಲಾಗಿದೆ ಎಂದು ಸಚಿವರು ಹೇಳಿದರು.

- Advertisement -
spot_img

Latest News

error: Content is protected !!