Thursday, June 4, 2026
Homeತಾಜಾ ಸುದ್ದಿಕೆಎಸ್ಸಾರ್ಟಿಸಿ ಬಸ್ಸಿನ ಪ್ರಯಾಣಿಕನ 5 ಲಕ್ಷ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದ ಚಾಲಕ, ನಿರ್ವಾಹಕ

ಕೆಎಸ್ಸಾರ್ಟಿಸಿ ಬಸ್ಸಿನ ಪ್ರಯಾಣಿಕನ 5 ಲಕ್ಷ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದ ಚಾಲಕ, ನಿರ್ವಾಹಕ

- Advertisement -
- Advertisement -

ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ಸಿನ ಪ್ರಯಾಣಿಕನ 5 ಲಕ್ಷ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಚಾಲಕ, ನಿರ್ವಾಹಕ ಹಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು-ತಿರುನಲ್ಲಾರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಪಕ್ಕದ ಸೀಟಲ್ಲಿ ಕುಳಿತಿದ್ದ ಪ್ರಯಾಣಿಕ ದಂಪತಿಯು ಊಟಕ್ಕಾಗಿ ಕೆಳಗಿಳಿದಿದ್ದಾಗ 5ಲಕ್ಷ ರೂ.ಹಣವನ್ನು ಕದ್ದು, ಎಲೆಕ್ಟ್ರಾನಿಕ್ ಸಿಟಿ ಸಿಗ್ನಲ್ ಬಳಿ ಇಳಿದು ಓಡಿಹೋಗುತ್ತಿದ್ದ.

ಇದನ್ನು ಗಮನಿಸಿದ ಚಾಲಕ ಮಂಜುನಾಥ್ ಹಾಗೂ ನಿರ್ವಾಹಕ ಸೋಮಪ್ಪ ಟಿ.ಎನ್. ಸದರಿ ಕಳ್ಳ ಪ್ರಯಾಣಿಕನನ್ನು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿ, ಶೌರ್ಯ ಮೆರಿದ್ದಾರೆ.ಈ ಘಟನೆ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಸಿಬ್ಬಂದಿಯ ಸಮಯ ಪ್ರಜ್ಞೆ, ಧೈರ್ಯ, ಸಾಹಸ ಮತ್ತು ಪ್ರಯಾಣಿಕರ ಬಗೆಗಿನ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!