Friday, May 3, 2024
Homeಕರಾವಳಿನೆಲ್ಯಾಡಿ: ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ, 6 ಮಂದಿಗೆ ಗಾಯ

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ, 6 ಮಂದಿಗೆ ಗಾಯ

spot_img
- Advertisement -
- Advertisement -

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ75ರ ಶಿರಾಡಿ ಗ್ರಾಮದ ಉದನೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್ಸಿನ ಹಿಂಬದಿಗೆ ಉದನೆಯಲ್ಲಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿದೆ. ಕಾರಿನಲ್ಲಿದ್ದ 6 ಮಂದಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಕಾರಿನಲ್ಲಿದ್ದವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಗಾಯಾಳುಗಳನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

- Advertisement -
spot_img

Latest News

error: Content is protected !!