- Advertisement -
![]()
- Advertisement -
ಚಾಮರಾಜನಗರ: ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಒಬ್ಬರು ಬಸ್ ನಲ್ಲಿಯೇ ಸುಶ್ರಾವ್ಯವಾಗಿ ಹಾಡು ಹೇಳಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಚಾಮರಾಜನಗರದಿಂದ ಹೊಗೇನಕಲ್ ಗೆ ತೆರಳುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುವ ಹೇಮಂತ್ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಗೀತೆಯನ್ನು ಹಾಡಿದ್ದು, ಇವರ ಗಾಯನಕ್ಕೆ ಪ್ರಯಾಣಿಕರು ಸೇರಿದಂತೆ ನೆಟ್ಟಿಗರು ಮಾರುಹೋಗಿದ್ದಾರೆ
ಇವರು ಹಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ.
- Advertisement -


