Sunday, May 5, 2024
Homeಕರಾವಳಿಮಂಗಳೂರುಸತತ 13ನೇ ವರ್ಷ ಆದಾಯದಲ್ಲಿ ರಾಜ್ಯದ ನಂಬರ್ ಆದ ಕುಕ್ಕೆ ಸುಬ್ರಮಣ್ಯ ದೇವಸ್ಥಾನ

ಸತತ 13ನೇ ವರ್ಷ ಆದಾಯದಲ್ಲಿ ರಾಜ್ಯದ ನಂಬರ್ ಆದ ಕುಕ್ಕೆ ಸುಬ್ರಮಣ್ಯ ದೇವಸ್ಥಾನ

spot_img
- Advertisement -
- Advertisement -

ಸುಬ್ರಹ್ಮಣ್ಯ: ಸತತ 13ನೇ ವರ್ಷ ಆದಾಯದಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ರಾಜ್ಯಕ್ಕೆ ನಂಬರ್ ಆಗಿದೆ. 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ ಆದಾಯ ಗಳಿಸಿದೆ. 2023 ಎಪ್ರೀಲ್‌ನಿಂದ 2024 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಾಲಯಕ್ಕೆ ಈ ಆದಾಯ ಲಭಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ ರಾಜ್ಯದ ನಂಬರ್ ದೇವಳವಾಗಿ ಮುಂದುವರೆದಿದೆ.ಕಳೆದ ವರ್ಷ ಶ್ರೀ ದೇವಳವು 123 ಕೋಟಿ ಆದಾಯ ಗಳಿಸಿತ್ತು.

ಹಲವಾರು ವರ್ಷಗಳಿಂದ ನಿರಂತರವಾಗಿ ಆದಾಯ ಗಳಿಕೆಯಲ್ಲಿ ರಾಜ್ಯದ ನಂಬರ್ ದೇವಸ್ಥಾನವಾಗಿ ಹೊರ ಹೊಮ್ಮಿರುವ ಕುಕ್ಕೆಯು ಈ ಬಾರಿ 146.01 ಕೋಟಿ ರೂ ಆದಾಯ ಗಳಿಸುವ ಮೂಲಕ ಸತತವಾಗಿ ನಂಬರ್ ವನ್ ಸ್ಥಾನವನ್ನು ಗಟ್ಟಿಗೊಳಿಸಿದೆ.ಉಳಿದಂತೆ ರಾಜ್ಯ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟ ಕೊಲ್ಲೂರು ಮುಕಾಂಬಿಕಾ ದೇವಳ 68.23 ಕೋಟಿ ರೂ, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ 30.73 ಕೋಟಿ ರೂ, ಸವದತ್ತಿ ರೇಣುಕಾ ಯಲ್ಲಮ್ಮ 25.80 ಕೋ ರೂ, ಮಂದಾರ್ತಿ ದುರ್ಗಾ ಪರಮೇಶ್ವರಿ ದೇವಸ್ಥಾನ 15.27 ಕೋ.ರೂ, ಕೊಪ್ಪಳ ಜಿಲ್ಲೆ ಹುಲಿಗೆಮ್ಮ ದೇವಿ ದೇವಸ್ಥಾನ 16.29 ಕೋ.ರೂ, ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ 13.65 ಕೋ ರೂ, ಬೆಂಗಳೂರಿನ ಬನಶಂಕರಿ ದೇವಸ್ಥಾನ 11.37 ಕೋ ರೂ ಆದಾಯ ಗಳಿಸಿದೆ.

- Advertisement -
spot_img

Latest News

error: Content is protected !!