Sunday, May 19, 2024
Homeಕರಾವಳಿಇಂದಿನಿಂದ ಭಕ್ತರಿಗೆ ಕುಕ್ಕೆ ಸುಬ್ರಹ್ಮಣ್ಯ ದರ್ಶನ : ನಿಯಮಗಳು ಅನ್ವಯ

ಇಂದಿನಿಂದ ಭಕ್ತರಿಗೆ ಕುಕ್ಕೆ ಸುಬ್ರಹ್ಮಣ್ಯ ದರ್ಶನ : ನಿಯಮಗಳು ಅನ್ವಯ

spot_img
- Advertisement -
- Advertisement -

ಸುಬ್ರಹ್ಮಣ್ಯ: ಮಹಾಮಾರಿ ಕೊರೊನಾ ಲಾಕ್ ಡೌನ್​​​ನಿಂದಾಗಿ ಮುಚ್ಚಿದ್ದ ಪ್ರಸಿದ್ಧ ನಾಗಕ್ಷೇತ್ರ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರ ದರ್ಶನ ಇಂದಿನಿಂದ ಪ್ರಾರಂಭವಾಗಿದೆ. ಸರ್ಕಾರದ ಮಾರ್ಗದರ್ಶನಗಳನ್ನು ಕಡ್ಡಾಯವಾಗಿ ಪಾಲಿಸಿ ದೇವರ ದರ್ಶನ ಪಡೆಯಬಹುದಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರವು ದೇಗುಲಕ್ಕೆ ಬರುವ ಭಕ್ತರಿಗೆ ಹಲವು ನಿಯಮಗಳನ್ನು ಜಾರಿಗೊಳಿಸಿದೆ.
ಕೊರೊನಾ ಮಹಾಮಾರಿ ತಡೆಯುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಹಾಗೂ ಇತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡುವ ಪೂರ್ಣ ಜವಾಬ್ದಾರಿಯನ್ನು ಆಯಾ ಧಾರ್ಮಿಕ ಕೇಂದ್ರ, ಸಂಸ್ಥೆಗಳಿಗೆ ವಹಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲೂ ಭಕ್ತರಿಗೆ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ‌. ಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬ ಭಕ್ತರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು.ದೇವಸ್ಥಾನದ ಮುಖ್ಯ ದ್ವಾರದ ಬಳಿ ನಿರ್ಮಿಸಿರುವ ಸ್ಯಾನಿಟೈಸರ್ ಸ್ಟಾಂಡ್​​​ನಲ್ಲಿ ಕೈಗಳನ್ನು ಶುಚಿಗೊಳಿಸಿ ದೇವಸ್ಥಾನಕ್ಕೆ ಪ್ರವೇಶಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.

- Advertisement -
spot_img

Latest News

error: Content is protected !!