Thursday, June 4, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಇ ನೇಮಕ ವಿವಾದ; ಧಾರ್ಮಿಕ ದತ್ತಿ‌ ಇಲಾಖೆಯಿಂದಲೇ ಅಧಿಕೃತ ಸ್ಪಷ್ಟೀಕರಣ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಇ ನೇಮಕ ವಿವಾದ; ಧಾರ್ಮಿಕ ದತ್ತಿ‌ ಇಲಾಖೆಯಿಂದಲೇ ಅಧಿಕೃತ ಸ್ಪಷ್ಟೀಕರಣ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.‌ ಯೇಸುರಾಜ್ ಹಿಂದೂ ಧರ್ಮಕ್ಕೆ ಸೇರಿದವರು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸ್ಪಷ್ಟಪಡಿಸಿದೆ.

ಈ ಕುರಿತು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಧಾರ್ಮಿಕ ದತ್ತಿ‌ ಇಲಾಖೆ, ಯೇಸುರಾಜ್ ಇಲಾಖೆಯ ನೌಕರರಾಗಿ ಸೇರ್ಪಡೆಗೊಳ್ಳುವ ಸಂದರ್ಭದಲ್ಲಿ ಹಾಜರುಪಡಿಸಿರುವ ದಾಖಲೆಗಳ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಸೇರಿದವರು ಎಂದು ಸ್ಪಷ್ಟೀಕರಣ ನೀಡಿದೆ.

2005ರ ಜನವರಿ 17 ರಂದು ಧಾರ್ಮಿಕ ದತ್ತಿ‌ ಇಲಾಖೆಯಲ್ಲಿ ನೌಕರರಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಯೇಸುರಾಜ್ ಅವರನ್ನು ಕೆಲವು ದಿನಗಳ ಹಿಂದೆ ರಾಮನಗರ ಜಿಲ್ಲೆಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಇ ಆಗಿ ವರ್ಗಾವಣೆ ಮಾಡಲಾಗಿತ್ತು.

ಯೇಸುರಾಜ್ ಹೆಸರಿನ ಹಿನ್ನೆಲೆಯಲ್ಲಿ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತಲ್ಲದೇ, ಖುದ್ದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರೇ ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಸಮೇತ ಸ್ಪಷ್ಟೀಕರಣ ನೀಡಿದ್ದರು.

- Advertisement -

Latest News

error: Content is protected !!