Thursday, September 10, 2026
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ ನಡೆಯಿತು. ಇಂದು ಮುಂಜಾನೆ 6.58ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ವಿವಿಧ ವೈದಿಕ ಕಾರ್ಯ ಹಾಗೂ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಮಹಾಪೂಜೆ ನಡೆಯಿತು, ಆ ಬಳಿಕ ಶ್ರೀ ಸುಬ್ರಹ್ಮಣ್ಯ ದೇವರು ರಥಾರೂಢರಾಗಿ ರಥೋತ್ಸವ ನಡೆಯಿತು.

ಶ್ರೀ ಸುಬ್ರಹ್ಮಣ್ಯ ದೇವರು ಬ್ರಹ್ಮ ರಥದಲ್ಲಿ, ಶ್ರೀ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾದ ಬಳಿಕ ಪಂಚಮಿ ತೇರನ್ನು ಎಳೆಯಲಾಯಿತು. ರಾಜ್ಯದ ಅತ್ಯಂತ ದೊಡ್ಡ ರಥಗಳಲ್ಲಿ ಶ್ರೀ ಸುಬ್ರಹ್ಮಣ್ಯ ಬ್ರಹ್ಮರಥವೂ ಒಂದಾಗಿದೆ. ಭಕ್ತ ಸಮೂಹ ದೇವರ ರಥೋತ್ಸವವನ್ನು ಕಣ್ತುಂಬಿಕೊಂಡರು

- Advertisement -

Latest News

error: Content is protected !!