Saturday, June 6, 2026
Homeತಾಜಾ ಸುದ್ದಿಮಗಳ ನಿಶ್ಚಿತಾರ್ಥದ ಸಂಭ್ರಮದಲ್ಲಿ ಶಾಸಕ ಕುಮಾರ್ ಬಂಗಾರಪ್ಪ

ಮಗಳ ನಿಶ್ಚಿತಾರ್ಥದ ಸಂಭ್ರಮದಲ್ಲಿ ಶಾಸಕ ಕುಮಾರ್ ಬಂಗಾರಪ್ಪ

- Advertisement -
- Advertisement -

ಶಿವಮೊಗ್ಗ: ಸೊರಬ ಕ್ಷೇತ್ರದ ಶಾಸಕ ಮತ್ತು ಕನ್ನಡ ಚಲನಚಿತ್ರ ನಟ ಕುಮಾರ್ ಬಂಗಾರಪ್ಪ ಅವರು ತಮ್ಮ ಮಗಳ ನಿಶ್ಚಿತಾರ್ಥ ಇತ್ತೀಚೆಗೆ ಭರ್ಜರಿಯಾಗಿ ನಡೆದಿದ್ದು, ಈ ಸಂತೋಷದ ಕ್ಷಣಗಳ ಫೋಟೋವನ್ನು ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಕುಮಾರ್ ಬಂಗಾರಪ್ಪ ಅವರ ಪುತ್ರಿ ಲಾವಣ್ಯ ಹಾಗೂ ವಿಕ್ರಮಾದಿತ್ಯ ಉಂಗುರುವನ್ನು ಬದಲಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಶುಭ ಸಮಾರಂಭದಲ್ಲಿ ವಧು ಮತ್ತು ವರನ ಕುಟುಂಬಸ್ಥರು ಭಾಗಿಯಾಗಿದ್ದರು. ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ.

ನನ್ನ ಮುದ್ದಿನ ಮಗಳ ನಿಶ್ಚಿತಾರ್ಥ ಕಾರ್ಯಕ್ರಮದ ಕೆಲವು ಫೋಟೊಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಕುಟುಂಬದ ಮೇಲೆ ಹೇಗೆ ಇದೆಯೋ ಹಾಗೆಯೇ ಈ ನವ ಜೋಡಿಗಳ ಮೇಲೆ ನಿಮ್ಮೆಲ್ಲರ ಆಶೀರ್ವಾದ ಹಾಗೂ ಹಾರೈಕೆಗಳು ಸದಾ ಇರಲಿ ಎಂದು ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ನಿಶ್ಚಿತಾರ್ಥದ ಕೆಲವು ಫೋಟೋವನ್ನು ಹಂಚಿಕೊಂಡಿದ್ದಾರೆ. ನೆಟ್ಟಿಗರು ನವ ಜೋಡಿಗೆ ಶುಭಾಶಯವನ್ನು ಕೋರುತ್ತಿದ್ದಾರೆ.

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕುಮಾರ್ ಬಂಗಾರಪ್ಪ ಈ ಬಾರಿ ಬಿಜೆಪಿ ಪಕ್ಷದಿಂದ ನಿಂತು ಶಾಸಕರಾಗಿದ್ದಾರೆ.

- Advertisement -

Latest News

error: Content is protected !!