- Advertisement -
![]()
- Advertisement -
ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ವಿಧಿವಶರಾಗಿದ್ದಾರೆ.
ಮಧ್ಯರಾತ್ರಿ 12 ಗಂಟೆ 1 ನಿಮಿಷಕ್ಕೆ ಬೆಂಗಳೂರಿನ ಕೆಂಗೇರಿಯಲ್ಲಿರುವ ಮಠದಲ್ಲಿ ಸ್ವಾಮೀಜಿ ಭೈರವೈಕ್ಯರಾಗಿದ್ದು, ಇಂದು ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ
ಮಧ್ಯಾಹ್ನ 3 ಗಂಟೆಗೆ ನೆರವೇರಲಿರುವ ಅಂತಿಮ ವಿಧಿ ವಿಧಾನಗಳು ನೆರವೇರಲಿದ್ದು, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಉತ್ತರಾಧಿಕಾರಿಯಾಗಿರುವ ನಿಶ್ವಲಾನಂದನಾಥ ಸ್ವಾಮೀಜಿ ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ.
ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪ್ರಥಮ ಪೀಠಾಧ್ಯಕ್ಷರಾಗಿದ್ದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಇತ್ತೀಚೆಗೆ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು.
- Advertisement -


