Monday, April 29, 2024
Homeಕರಾವಳಿನಿರಂತರ ಮಳೆಗೆ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ನಿರಂತರ ಮಳೆಗೆ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

spot_img
- Advertisement -
- Advertisement -

ಕಡಬ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.‌ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೀಳುತ್ತಿರುವ ನಿರಂತರ ಮಳೆಯಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶ ಮತ್ತು ಕುಮಾರ ಧಾರಾ ಪರ್ವತಗಳಿಂದ ನೀರು ಹರಿದು ಬರುತ್ತಿರುವ ಕಾರಣ ಸ್ನಾನ ಘಟ್ಟ ಮುಳುಗಲ್ಪಟ್ಟಿದೆ. ಸ್ನಾನಘಟ್ಟ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಸಮೀಪದಲ್ಲೇ ತೀರ್ಥ ಸ್ನಾನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಳೆಯಿಂದ ತೊಂದರೆ ಅನುಭವಿಸುವಂತಾಗಿದೆ. ಜೊತೆಗೆ ಸ್ನಾನಘಟ್ಟಕ್ಕೆ ತೆರಳುವ ಭಕ್ತರಿಗೆ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ. ಪ್ರತಿ ವರ್ಷವೂ ಮಳೆಗಾಲದಲ್ಲಿ ಕುಮಾರಧಾರಾ ಸ್ನಾನಘಟ್ಟ ಮುಳುಗಲ್ಪಡುತ್ತದೆ

- Advertisement -
spot_img

Latest News

error: Content is protected !!