Monday, May 6, 2024
HomeUncategorizedಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ; ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಮಾಜಿ ಸಿಎಂ...

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ; ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಮಾಜಿ ಸಿಎಂ ಪರದಾಟ

spot_img
- Advertisement -
- Advertisement -

ಬೆಂಗಳೂರು; ಸಿಎಂ ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ದೃಢವಾದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ  ಎಚ್. ಡಿ. ಕುಮಾರಸ್ವಾಮಿ, “ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ” ಎಂದು ಹೇಳಿದ್ದಾರೆ.

“ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಟ್ವೀಟ್ ಮೂಲಕ ಹೆಚ್. ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಹೆಚ್. ಡಿ ಕುಮಾರಸ್ವಾಮಿ ಅವರು ಕೆಲವು ದಿನಗಳ ಹಿಂದೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರವನ್ನು ಕೈಗೊಂಡಿದ್ದರು. ಇಂದು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.

ಕೋವಿಡ್ ಸೋಂಕು ದೃಢಪಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿಕ್ಸಿತ್ರೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಲು ಇಚ್ಛಿಸಿದ್ದು ಸದ್ಯ ಅಲ್ಲಿ ಅವರಿಗೆ ಬೆಡ್ ಸಿಕ್ಕಿಲ್ಲ ಎನ್ನಲಾಗಿದೆ.

ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು? ಎಂಬ ಮಾತು ಕೇಳಿ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ

ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿ ಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ ಎನ್ನಲಾಗಿದೆ.

ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ್ದರ ಫಲವಾಗಿ ಬೆಡ್ ಸಿಕ್ಕಿದೆ.ಅದರೆ ಬೆಡ್ ಸಿಕ್ಕರೂ ಅವರು ತಕ್ಷಣ ಅಡ್ಮಿಟ್ ಆಗಲಾಗಿಲ್ಲ.ಬದಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಇಂದು ಅವರು ಹಾಜರಾಗಲೇ ಬೇಕಿದೆ.

- Advertisement -
spot_img

Latest News

error: Content is protected !!