Friday, June 26, 2026
Homeತಾಜಾ ಸುದ್ದಿಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿರುವಾಗಲೇ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ; ಆಸ್ಪತ್ರೆಗೆ ದಾಖಲು

ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿರುವಾಗಲೇ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿರುವಾಗಲೇ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಯಿತು. ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಟದ ಬಗ್ಗೆ ನಡೆದಂತ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಹೆಚ್.ಡಿ ಕುಮಾರಸ್ವಾಮಿ ಪ್ರಾರಂಭಿಸಿದಾಗ ಅವರ ಮೂಗಿನಲ್ಲಿ ರಕ್ತ ಸೋರುವುದಕ್ಕೆ ಶುರುವಾಗಿದೆ. ಕೂಡಲೇ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿ ಅವರು, ಅಲ್ಲಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದಿನ ಈ ಸಭೆಯಲ್ಲಿ ಆಗಸ್ಟ್.3ರಿಂದ ಬೆಂಗಳೂರಿನಿಂದ ಮೈಸೂರಿಗೆ ಮುಡಾ ಅಕ್ರಮ ಖಂಡಿಸಿ ಪಾದಯಾತ್ರೆ ನಡೆಸುವಂತ ನಿರ್ಧಾರವನ್ನು ಕೈಗೊಳ್ಳಲಾಯಿತು. ಆಗಸ್ಟ್.10ರಂದು ಮೈಸೂರಿನಲ್ಲಿ ಸಮಾರೋಪ ಸಮಾರಂಭವನ್ನು ನಡೆಸೋದಕ್ಕೆ ನಿರ್ಧರಿಸಲಾಗಿದೆ.

- Advertisement -

Latest News

error: Content is protected !!