Thursday, April 25, 2024
Homeಕರಾವಳಿಕಳಚಿತು ಯಕ್ಷಗಾನ ಲೋಕದ ಮಹಾನ್ ಕೊಂಡಿ; ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ ವಿಧಿವಶ

ಕಳಚಿತು ಯಕ್ಷಗಾನ ಲೋಕದ ಮಹಾನ್ ಕೊಂಡಿ; ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ ವಿಧಿವಶ

spot_img
- Advertisement -
- Advertisement -

ಮಂಗಳೂರು: ಯಕ್ಷಗಾನ ಲೋಕಕ್ಕೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿದ್ದ ಯಕ್ಷ ಲೋಕದ ತಾರೆ ಕುಂಬ್ಳೆ ಸುಂದರ್ ರಾವ್ (90) ವಿಧಿವಶರಾಗಿದ್ದಾರೆ.

ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬ್ಳೆ ಸುಂದರ್ ರಾವ್.

ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯನಿರ್ವಹಿಸಿದ್ದರು, ಅಲ್ಲದೆ 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಗೂ ಕುಂಬಳೆ ಸುಂದರ್ ರಾವ್ ಪಾತ್ರರಾಗಿದ್ದರು.

ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಸುಂದರ್ ರಾವ್ ಅವರು ಪತ್ನಿ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಗುರುವಾರ ನೆರವೇರಲಿದೆ.ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

- Advertisement -
spot_img

Latest News

error: Content is protected !!