Friday, June 5, 2026
HomeUncategorizedಕುಂದಾಪುರ: ಬೈಕ್ ಗಳ ಮಧ್ಯೆ ಡಿಕ್ಕಿ, ಸವಾರ ಸಾವು

ಕುಂದಾಪುರ: ಬೈಕ್ ಗಳ ಮಧ್ಯೆ ಡಿಕ್ಕಿ, ಸವಾರ ಸಾವು

- Advertisement -
- Advertisement -

ಕುಂದಾಪುರ: ಬೈಕ್ ಗಳ ಮಧ್ಯೆ ಡಿಕ್ಕಿ ಸಂಭವಿಸಿ, ಸವಾರ ಸಾವನ್ನಪ್ಪಿರುವ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ ನಡೆದಿದೆ. ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ಲು ನಿವಾಸಿಯಾದ ಪೈಂಟರ್‌ ವೆಂಕಟೇಶ್‌ ಇವರ ಪುತ್ರ ಶಶಾಂಕ್‌ ಮೊಗವೀರ (22) ಮೃತ ದುರ್ದೈವಿ.

ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಶಾಂಕ ಮೊಗವೀರ ರಾತ್ರಿ ಶನಿವಾರ 11.00 ರ ವೇಳೆಗೆ ರಿಲಯನ್ಸ್‌ ಪೆಟ್ರೋಲ್‌ ಬಂಕಿನಲ್ಲಿ ಪೆಟ್ರೋಲ್‌ ತುಂಬಿಸಿಕೊಂಡು ಮನೆಗೆ ಹಿಂತಿರುಗುವ ಸಮಯದಲ್ಲಿ ಅಪಘಾತವಾಗಿದ್ದು ತಕ್ಷಣ ಅವರನ್ನು ಮಣಿಪಾಲದ ಕೆಏಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮದ್ಯೆ ಅವರು ಕೊನೆರುಸಿರೆಳೆದಿದ್ದಾರೆ.

ಬುಲೆಟ್‌ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಕೆಎಂಸಿಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!