Thursday, June 25, 2026
Homeಕರಾವಳಿಉಡುಪಿಕುಂದಾಪುರ:ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ ಮಗನಿಗೆ ಟಿಪ್ಪರ್ ಡಿಕ್ಕಿ; ತಾಯಿ ಸಾವು

ಕುಂದಾಪುರ:ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ ಮಗನಿಗೆ ಟಿಪ್ಪರ್ ಡಿಕ್ಕಿ; ತಾಯಿ ಸಾವು

- Advertisement -
- Advertisement -

ಕುಂದಾಪುರ:ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ ಮಗನಿಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿಯಾಗಿತಾಯಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ. ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಅವರ ಪತ್ನಿ ಶಾರದ (55)ಮೃತರು.

ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.  ಪರಿಣಾಮ ಶಾರದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಾರದ ಅವರು ಮಗನೊಂದಿಗೆ ಸ್ಕೂಟಿಯಲ್ಲಿ ಕೋಟೇಶ್ವರ ಅಂಕದ ಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಶಾರದ ಅವರುಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ

- Advertisement -

Latest News

error: Content is protected !!