Saturday, June 27, 2026
Homeಕರಾವಳಿಉಡುಪಿಕುಂದಾಪುರ: ಸರಕಾರಿ ಬಸ್ ಗೆ ಟಿಪ್ಪರ್ ಡಿಕ್ಕಿ; 7 ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ

ಕುಂದಾಪುರ: ಸರಕಾರಿ ಬಸ್ ಗೆ ಟಿಪ್ಪರ್ ಡಿಕ್ಕಿ; 7 ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ

- Advertisement -
- Advertisement -

ಕುಂದಾಪುರ: ಸರಕಾರಿ ಬಸ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ 7 ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯಗಳಾಗಿರುವ ಘಟನೆ ತಲ್ಲೂರು-ನೇರಳಕಟ್ಟೆ ರಸ್ತೆಯ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.
ಕುಂದಾಪುರದಿಂದ ಅಜ್ರಿ-ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್, ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ ನಡುವೆ ಈ ಅಪಘಾತ ಸಂಭವಿಸಿದೆ. ಟಿಪ್ಪರ್ ಬಸ್‌ನ ಬಲಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಗೆ ವ್ಯಾಪಕ ಹಾನಿಯಾಗಿದೆ.

ಡಿಕ್ಕಿಯ ಪರಿಣಾಮವಾಗಿ ಬಸ್‌ನ ಚಾಲಕನ ಬದಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸಂಜೆ ವೇಳೆ ಘಟನೆ ನಡೆದಿದ್ದರಿಂದ, ಬಸ್ ಕಾಲೇಜು ವಿದ್ಯಾರ್ಥಿಗಳಿಂದ ತುಂಬಿತ್ತು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಮಂದಿ ಪ್ರಯಾಣಿಕರು ಗಾಯಗೊಂಡರು. ಇದರಲ್ಲಿ ಮೂವರ ಸ್ಥಿತಿ ಗಂಭೀರ ವಾಗಿದ್ದು, ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಪ್ಪರ್ ಚಾಲಕ ರಾಘವೇಂದ್ರ ತೀವ್ರ ಗಾಯ ಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!