Monday, May 6, 2024
Homeಕರಾವಳಿಉಡುಪಿಲಾಕ್ ಡೌನ್ ಸಂಕಷ್ಟ: ಶಾಲಾ ಮಕ್ಕಳ 70 ಲಕ್ಷ ಫೀಸ್ ಮನ್ನಾ ಮಾಡಿದ ಶಾಸಕ ಸುಕುಮಾರ್...

ಲಾಕ್ ಡೌನ್ ಸಂಕಷ್ಟ: ಶಾಲಾ ಮಕ್ಕಳ 70 ಲಕ್ಷ ಫೀಸ್ ಮನ್ನಾ ಮಾಡಿದ ಶಾಸಕ ಸುಕುಮಾರ್ ಶೆಟ್ಟಿ

spot_img
- Advertisement -
- Advertisement -

ಉಡುಪಿ : ಕೊರೊನಾ ಹೊಡೆತಕ್ಕೆ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಹೆಮ್ಮಾರಿಯ ಕಾರಣ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರು ತಮ್ಮ ಮಕ್ಕಳ ಶಾಲಾ ಫೀಸ್ ಕಟ್ಟಲಾಗದ ಸ್ಥಿತಿಯಲ್ಲಿದ್ದಾರೆ. ಏತನ್ಮಧ್ಯೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಈ ವರ್ಷ ತಮ್ಮ ಶಿಕ್ಷಣ ಸಂಸ್ಥೆಗಳ 70 ಲಕ್ಷ ಫೀಸ್ ಮನ್ನಾ ಮಾಡಲು ನಿರ್ಧಾರ ಮಾಡಿದ್ದು, ಎಲ್ಲರಿಗೂ ಮಾದರಿಯಾಗಿದ್ದಾರೆ.

ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿರುವ ಅವರು, ನಾಲ್ಕು ಶಿಕ್ಷಣ ಸಂಸ್ಥೆ ಹೊಂದಿದ್ದಾರೆ. ಕಳೆದ ವರ್ಷದ ಒಂದೂವರೆ ಕೋಟಿ ಫೀಸ್ ಮಕ್ಕಳಿಂದ ಬಾಕಿಯಿದೆ. ಕೊರೊನಾ ಹಿನ್ನೆಲೆ ಈ ಬಾರಿ ಫೀಸ್ ಶುಲ್ಕದ ಪೈಕಿ 70 ಲಕ್ಷ ರುಪಾಯಿ ಮನ್ನಾ ಮಾಡಲು ಸುಕುಮಾರ್ ಅವರು ನಿರ್ಧಾರಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜದ ಕಟ್ಟ ಕಡೆಯ ಕುಟುಂಬದ ಮಕ್ಕಳಿಗೆ ಫೀಸ್ ತೆಗೆದುಕೊಳ್ಳಲ್ಲ. ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ಕೊಡುತ್ತೇವೆ. ಕೆಲ ಕುಟುಂಬಗಳಿಗೆ ಅರ್ಧ ಫೀಸ್ ತೆಗೆದುಕೊಳ್ಳುತ್ತೇವೆ. ಶ್ರೀಮಂತರ ಮಕ್ಕಳಿಗೆ ಫುಲ್ ಫೀಸ್ ತೆಗೆದುಕೊಳ್ಳುತ್ತೇವೆ. ತಮ್ಮಲ್ಲಿ ಶಿಕ್ಷಣ ಗುಣಮಟ್ಟ ವಿಚಾರದಲ್ಲಿ ರಾಜಿ ಇಲ್ಲ. ಒತ್ತಡ ಹೇರಿ, ಬಲವಂತವಾಗಿ ಫೀಸ್ ಕಿತ್ತುಕೊಳ್ಳುವ ಪರಿಪಾಠ ಹಿಂದಿನಿಂದಲೇ ಇಲ್ಲ. ಮುಂದೆಯೂ ಮಾಡದಂತೆ ಸಿಬ್ಬಂದಿಗೆ ಸೂಚಿಸಿರುವುದಾಗಿ ಶಾಸಕರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!