Thursday, June 4, 2026
Homeಕರಾವಳಿಉಡುಪಿಉಡುಪಿ : ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಕಾಲೇಜಿಗೆ ರಾಷ್ಟ್ರೀಯ ಮಹಿಳಾ...

ಉಡುಪಿ : ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ

- Advertisement -
- Advertisement -

ಡುಪಿ : ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಭೇಟಿ ನೀಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮೆಡಿಕಲ್ ಸ್ಟೂಡೆಂಟ್ಸ್ ಗೆ ಆದ ಸಮಸ್ಯೆ ವಿಚಾರಣೆಗೆ ಬಂದಿದ್ದೇನೆ.

ನಾನು ಮೊದಲು ಪೊಲೀಸರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ. ಎಲ್ಲರ ಜೊತೆ ಮಾತನಾಡಿದ ನಂತರ ನಾನು ಮಾಧ್ಯಮಗಳಿಗೆ ವಿವರಿಸುತ್ತೇನೆ” ಎಂದರು.

”ಪ್ರಕರಣವನ್ನು ಸಂಪೂರ್ಣವಾಗಿ ನಾನು ಮೊದಲು ಆರಿತುಕೊಳ್ಳಬೇಕಾಗಿದೆ. ಒಟ್ಟು ಎರಡು ದಿನ ನಾನು ಉಡುಪಿಯಲ್ಲಿ ಇರುತ್ತೇನೆ. ಕಾಲೇಜಿಗೆ ಭೇಟಿ ಕೊಡುತ್ತೇನೆ” ಎಂದರು.

- Advertisement -

Latest News

error: Content is protected !!