Friday, October 4, 2024
Homeಕರಾವಳಿಬೆಳ್ತಂಗಡಿ ತಾಲೂಕಿನ  ಕುತ್ಲೂರು ಗ್ರಾಮಕ್ಕೆ ರಾಷ್ಟ್ರಪ್ರಶಸ್ತಿಯ ಗರಿ

ಬೆಳ್ತಂಗಡಿ ತಾಲೂಕಿನ  ಕುತ್ಲೂರು ಗ್ರಾಮಕ್ಕೆ ರಾಷ್ಟ್ರಪ್ರಶಸ್ತಿಯ ಗರಿ

spot_img
- Advertisement -
- Advertisement -

ಬೆಳ್ತಂಗಡಿ ತಾಲೂಕಿನ  ಕುತ್ಲೂರು ಗ್ರಾಮ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದೆ.  ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷ ಕೊಡ ಮಾಡುವ ಅತ್ಯುತ್ತಮ ಪ್ರವಾಸಿ ಹಳ್ಳಿಗಳು   ಸ್ಪರ್ಧೆಯಲ್ಲಿ ದಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ಎಂಬ ರಾಷ್ಟ್ರಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ

ಸಪ್ಟೆಂಬರ್‌ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ ಸಚಿವರು , ಉಪ ರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್  ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕುತ್ಲೂರು ಗ್ರಾಮಸ್ಥರ ಪರವಾಗಿ ಹರೀಶ್ ಡಿ ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಫಿಟೀಶನ್-2024  ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ. ವ್ಯಾಪ್ತಿಯ ಕುತ್ಲೂರು ನಿವಾಸಿಗಳಾದ ಹರೀಶ್ ಡಿ. ಸಾಲ್ಯಾನ್ ಹಾಗೂ ಶಿವರಾಜ್ ಮತ್ತು ಸಂದೀಪ್ ಪೂಜಾರಿ ನಾರಾವಿ ಇವರು ಕುತ್ಲೂರು ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗಿನ ಬಗ್ಗೆ ಒಂದು ಡ್ಯಾಕುಮೆಂಟರಿ ಮಾಡಿ ಇದನ್ನು ಸ್ಪರ್ಧಾ ನಿಯಮದಂತೆ ಆನ್‌ಲೈನ್‌ನಲ್ಲಿ ಆಪ್‌ಲೋಡ್ ಮಾಡಿದ್ದರು. ಇದರ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಮಂತ್ರಾಲಯ ಪಡೆದುಕೊಂಡಿತ್ತು. ದೇಶದ್ಯಾಂತ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮ ಆಯ್ಕೆಯಾಗಿದೆ. ಇದರಿಂದಾಗಿ ಕುತ್ಲೂರು ಗ್ರಾಮಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆಯಿದೆ

- Advertisement -
spot_img

Latest News

error: Content is protected !!