Friday, May 3, 2024
Homeಕರಾವಳಿಬೆಳ್ತಂಗಡಿ : ನೆರಿಯ ಗ್ರಾಮದಲ್ಲಿ ಸ್ಮಶಾನದ ಕೊರತೆ :ಮೃತ ದೇಹ ಮನೆಯ ಅಂಗಳದಲ್ಲಿಟ್ಟು ಪ್ರತಿಭಟನೆ

ಬೆಳ್ತಂಗಡಿ : ನೆರಿಯ ಗ್ರಾಮದಲ್ಲಿ ಸ್ಮಶಾನದ ಕೊರತೆ :ಮೃತ ದೇಹ ಮನೆಯ ಅಂಗಳದಲ್ಲಿಟ್ಟು ಪ್ರತಿಭಟನೆ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದಿರುವುದರಿಂದ  ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ  ಗ್ರಾಮ ಪಂಚಾಯತ್ ಎದುರು ಮೃತ ದೇಹವನ್ನು ಇಟ್ಟು  ಗ್ರಾಮಸ್ಥರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.‌ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವಾರೂ ಗ್ರಾಮ ಸಭೆಗಳಲ್ಲಿ ಬೇಡಿಕೆ ಇಟ್ಟರೂ ಯಾರು ಕೂಡ ಗ್ರಾಮಸ್ಥರ ಮನವಿಗೆ ಸ್ಪಂದನೆ ಸಿಗುತ್ತಿಲ್ಲ ಎಂದು   ನೆರಿಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

 ಜು 14 ರಂದು  ಜನತಾ ಕಾಲನಿ ನಿವಾಸಿ ಸಂಜೀವ ಗೌಡ(49)  ಮೃತಪಟ್ಟಿದ್ದು ಅವರ ಮೃತ ದೇಹವನ್ನು ಮನೆಯ ಅಂಗಳದಲ್ಲಿಟ್ಟು ಪ್ರತಿಭಟನೆ ನಡೆಸುತ್ತಿದ್ದು.ಅಧಿಕಾರಿಗಳು ಇಲ್ಲದಿದ್ದಲ್ಲಿ ನೆರಿಯ ಗ್ರಾಮ ಪಂಚಾಯತ್ ಎದುರು ಇಟ್ಟು ಪ್ರತಿಭಟನೆಗೆ ಊರವರು ಮುಂದಾಗಿದ್ದಾರೆ. ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಅವರ ಅಂತ್ಯ ಸಂಸ್ಕಾರವನ್ನು ನೆರಿಯ ಗ್ರಾಮ ಪಂಚಾಯತ್ ಎದುರೇ  ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು  ಗ್ರಾಮಸ್ಥರು ನೀಡಿದ್ದಾರೆ.ಮೃತರ ಮನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು  ಅಧಿಕಾರಿಗಳು  ಬಂದು ಗ್ರಾಮಸ್ಥರ ಮನವೊಲಿಸಿದರೂ ಇಷ್ಟು ವರ್ಷ ಬೇಡಿಕೆ ಈಡೇರಿಲ್ಲ ಸ್ಮಶಾನ ಆಗುವ ತನಕ ಪಂಚಾಯತ್ ಗೆ ಬೀಗ ಹಾಕಿ ಎಂದು ತರಾಟೆಗೆ ತಗೊಂಡಿದ್ದಾರೆ.ಸ್ಥಳಕ್ಕೆ ತಹಶೀಲ್ದಾರ್ ಬಂದ್ದು ನಮಗೆ ಜಾಗ ಇವತ್ತೇ ನಿಗದಿ ಪಡಿಸಬೇಕು ಒಂದು ವೇಳೆ ಇವತ್ತೂ ಕೂಡ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಪಂಚಾಯತ್ ಎದುರು ಅಂತ್ಯ ಸಂಸ್ಕಾರವನ್ನು ನರವೇರಿಸುತ್ತೇವೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.ಸ್ಥಳದಲ್ಲಿ ಜನ ಜಮಾಯಿಸಿದ್ದು. ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿದ್ದಾರೆ.

- Advertisement -
spot_img

Latest News

error: Content is protected !!