- Advertisement -
- Advertisement -
ಕೊಡಗು; 14 ದಿನಗಳ ಬಾಣಂತಿ ಆತ್ಮಹತ್ಯೆಗೆ ಶರಣಾದ ಘಟನೆ ವಿರಾಜಪೇಟೆಯ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ಕೊಟ್ಟೋಳಿ ಗ್ರಾಮ ನಿವಾಸಿ ದಿನೇಶ್ ಎಂಬವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದವರು.
ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ. ಫೆಬ್ರವರಿ12 ರಂದು ಪತಿ ದಿನೇಶ್ ತಮ್ಮ ಮನೆಯ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಾನಸಿಕ ಖಿನ್ನತೆಯಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
- Advertisement -