- Advertisement -
- Advertisement -
ಸುಳ್ಯ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಮಕಾರು ಪಾಂಡಿಗದ್ದೆ ಎಂಬಲ್ಲಿ ನಡೆದಿದೆ. ಭಾಗೀರಥಿ(47) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಭಾಗೀರಥಿ ಅವರು ವಿಷ ಸೇವಿಸಿ ಒದ್ದಾಡುತ್ತಿದ್ದನ್ನು ಗಮನಿಸಿದ ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ , ಅಷ್ಟರಲ್ಲಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -