Thursday, June 4, 2026
Homeಕರಾವಳಿಉಡುಪಿಕಾರ್ಕಳ: ಪತಿ ಮತ್ತು ಅತ್ತೆಯ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

ಕಾರ್ಕಳ: ಪತಿ ಮತ್ತು ಅತ್ತೆಯ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ಪತಿ ಮತ್ತು ಅತ್ತೆಯ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೆಳ್ಳಾರು ರಸ್ತೆಯ ಶರಣಮ್ಮ ಎಂಬವರ ಮಗಳು ಶಂಕ್ರಮ್ಮ ಮೃತ ದುರ್ದೈವಿ.

ಶಂಕ್ರಮ್ಮ ಅವರನ್ನು  2023ರ ಡಿ.6ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ನೀರಲಕೆರೆಯ ಯಲ್ಲನ ಎಂಬವರಿಗೆ ಮದುವೆ ಮಾಡಿ ಕೊಡಲಾಗಿತ್ತು.  ಆ ಬಳಿಕ ಶಂಕ್ರಮ್ಮ ಗಂಡನ ಮನೆಯಲ್ಲಿ ವಾಸವಾಗಿದ್ದರು. ಆದರೆ  ಗಂಡ ಯಲ್ಲನ ಹಾಗೂ ಅತ್ತೆ ಗೌರಮ್ಮ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದು, ಇದರಿಂದ ಮನನೊಂದ ಆಕೆ ಮೇ 30ರಂದು ಕಾರ್ಕಳದಲ್ಲಿರುವ ತಾಯಿ ಮನೆಗೆ ಬಂದಿದ್ದರು. ಬಳಿಕ ಜೂ.1ರಂದು ಬೆಳಗ್ಗೆ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!