Monday, June 8, 2026
Homeಕರಾವಳಿಉಪ್ಪಿನಂಗಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಉಪ್ಪಿನಂಗಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಉಪ್ಪಿನಂಗಡಿ; ಬಾವಿಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ.

ಪಡಬೆಟ್ಟು ರಾಮಸಾಗು ನಿವಾಸಿ ಶಿವಪ್ಪ ಎಂಬವರ ಪತ್ನಿ ಕುಶಲಾವತಿ(45) ಮೃತ ದುರ್ದೈವಿ.

ಕಳೆದ ಹಲವು ಸಮಯದಿಂದ ಮಧುಮೇಹದಿಂದ ಬಳಲುತ್ತಿದ್ದು ಇದು ಗ್ರಾಂಗ್ರಿನ್ ಹಂತವನ್ನು ತಲುಪಿತ್ತು ಎನ್ನಲಾಗಿದೆ . ಇದರಿಂದ ಮನನೊಂದು   ರಾತ್ರಿ ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!