Saturday, June 6, 2026
Homeಕರಾವಳಿಬಂಟ್ವಾಳ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೊಬ್ಬರು  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.

ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇನ್ನು ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ವ್ಯಕ್ತಿಯೊಬ್ಬ ಕಾರಣ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.  ರವಿ ಎಂಬಾತನ ಬಗ್ಗೆ ಸಂಶಯವಿದ್ದು, ಪತ್ನಿ ಜೊತೆ ಈತ ಸಲುಗೆಯಿಂದ ಇದ್ದು ಇಬ್ಬರಿಗೂ ಬುದ್ದಿವಾದ ಹೇಳಿದ್ದೆ. ಆದರೆ ಇತ್ತೀಚಿಗೆ ಪತ್ನಿ ಈತನ ಕಾಟ ತಾಳಲಾರದೆ ಮಾನಸಿಕವಾಗಿ ನೊಂದಿದ್ದಳು. ಹಾಗಾಗಿ ಪತ್ನಿಯನ್ನು ಏಕಾಂಗಿಯಾಗಿ ಬಿಟ್ಟು ಹೋಗುತ್ತಿರಲಿಲ್ಲ. ಆದರೆ ಮೊನ್ನೆ ಅಗತ್ಯವಾಗಿ ಹೊರಗೆ ಹೋಗಲು ಇದ್ದ ಕಾರಣ ಹೋಗಿ ವಾಪಾಸು ಬರುವ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದಿದ್ದಾರೆ.  

- Advertisement -

Latest News

error: Content is protected !!