- Advertisement -
![]()
- Advertisement -
ಕಾರ್ಕಳ ಮೂಲದ ವಿವಾಹಿತೆ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಶ್ರೀನಿಧಿ (24) ಮೃತ ವಿವಾಹಿತೆ.
ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು. ಶ್ರೀನಿಧಿ ಮೃತ ದೇಹ ಫೆ. 20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶ್ರೀನಿಧಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -


