Friday, June 5, 2026
Homeಕರಾವಳಿಉಡುಪಿಉಡುಪಿ: ಕೋಡಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಉಡುಪಿ: ಕೋಡಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

- Advertisement -
- Advertisement -

ಉಡುಪಿ: ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದ ಕೋಡಿ ಸಮುದ್ರ ಕಿನಾರೆಯಲ್ಲಿ ನಡೆದಿದೆ. ಸುಮಾರು 35 ರಿಂದ 45 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಶವ ಗಮನಿಸಿದ ಸ್ಥಳೀಯರು ಕೊಡಲೇ ಕೋಟ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿರುತ್ತಾರೆ. ತಕ್ಷಣ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ. ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಮೃತದೇಹವು ಬೇರೆ ಕಡೆಯಲ್ಲಿ ನೀರಿನಲ್ಲಿ ಅಥವಾ ಸಮುದ್ರದಲ್ಲಿ ಬಿದ್ದು ಮೃತಪಟ್ಟು ಸಮುದ್ರದಲ್ಲಿ ತೇಲಿ ಬಂದಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೃತ ದೇಹವನ್ನು ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ಮಣಿಪಾಲ ಶವಗಾರಕ್ಕೆ ಸಾಗಿಸಿದರು.

- Advertisement -

Latest News

error: Content is protected !!