Thursday, June 4, 2026
Homeಕರಾವಳಿಬೆಳ್ತಂಗಡಿ : ಅಪರಿಚಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ಅಪರಿಚಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಕಿನ್ನಿಗೋಳಿ ಉದಯ ಕುಮಾರ್ ಎಂಬವರ ಜಾಗದಲ್ಲಿ ಸುಮಾರು 35 ರಿಂದ 40 ವರ್ಷದೊಳಗಿನ ಅಪರಿಚಿತ ಮಹಿಳೆಯ ಶವ ನೇಣುಬಿಗಿದು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.

ಮಾ.26 ರಂದು ಮಧ್ಯಾಹ್ನ ವ್ಯಕ್ತಿಯೊಬ್ಬರು ಮೂತ್ರವಿಸರ್ಜನೆ ಮಾಡಲು ಹೋದಾಗ ನೇಣುಬಿಗಿದುಕೊಂಡಿದ್ದು ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಎರಡು ಪ್ಲಾಸ್ಟಿಕ್ ಬಕೆಟ್ ಮತ್ತು ಫೆ.19 ರ ಮಂಗಳೂರು ಸ್ಟೇಟ್ ಬ್ಯಾಂಕ್ ನಿಂದ ಗುರುವಾಯನಕೆರೆಗೆ ಮಾಡಿದ ಬಸ್ ಟಿಕೆಟ್ ಪತ್ತೆಯಾಗಿದೆ..

ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ , ಸಬ್ ಇನ್ಸ್ಪೆಕ್ಟರ್ ಅರ್ಜುನ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜಾಗದ ಮಾಲೀಕ ಉದಯ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ದೂರು ನೀಡಿದ್ದಾರೆ. ಮಂಗಳೂರು ಆಸ್ಪತ್ರೆಯ ವೈದ್ಯರು ಘಟನಾ ಸ್ಥಳಕ್ಕೆ ಬಂದು ಶವಪರೀಕ್ಷೆ ಮಾಡಿ ದಫನ ಮಾಡಲಾಗಿದೆ

- Advertisement -

Latest News

error: Content is protected !!