Friday, June 5, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಬೇರೆಯವರ ಮನೆಗೆ ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಸಾವು

ಉಪ್ಪಿನಂಗಡಿಯಲ್ಲಿ ಬೇರೆಯವರ ಮನೆಗೆ ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಸಾವು

- Advertisement -
- Advertisement -

ಉಪ್ಪಿನಂಗಡಿ.: ಬೇರೆಯವರ ಮನೆಗೆ ಕೆಲಸಕ್ಕೆಂದು ಹೋಗಿದ್ದ ಮಹಿಳೆಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಗಂಡಿಯ ಕರಾಯ ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ.

ಕಕ್ಕೆಪದವು ಉಳಿ ಗ್ರಾಮದ ನಿವಾಸಿ ದೇವಕಿ (62) ಮೃತ ದುರ್ದೈವಿ. ಈಕೆ ರಾಮಕೃಷ್ಣ ಕರ್ಕೇರ ಎಂಬವರ ಮನೆ ಕೆಲಸಕ್ಕೆಂದು ಬಂದಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.

- Advertisement -

Latest News

error: Content is protected !!