Friday, June 5, 2026
Homeಕರಾವಳಿಮಂಗಳೂರು; ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ವಾಪಾಸ್ಸಾಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ

ಮಂಗಳೂರು; ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ವಾಪಾಸ್ಸಾಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ

- Advertisement -
- Advertisement -

ಮಂಗಳೂರು: ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ವಾಪಾಸ್ಸಾಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮಂಜೇಶ್ವರ,ಕುಂಜತ್ತೂರು ನಿವಾಸಿ ಬಿ.ಫಾತಿಮಾ(85)ಮೃತ ದುರ್ದೈವಿ.

ಫಾತಿಮಾ ಅವರು ತನ್ನ ಮಗ ಮೂಸ(50) ಮೊಮ್ಮಗ ಮಸ್ತಫಾ(24) ಅವರೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಉಚ್ಚಿಲ ಎಂಬಲ್ಲಿ ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಫಾತಿಮಾ ಮೃತಪಟ್ಟಿದ್ದಾರೆ. ಜೊತೆಗಿದ್ದ ಮಗ ಹಾಗೂ ಮೊಮ್ಮಗ ಗಾಯಗೊಂಡಿದ್ದಾರೆ.

ಫಾತಿಮಾ ಓಮ್ನಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದು ಮೊಮ್ಮಗ ಮುಸ್ತಫಾ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ನಿದ್ದೆ ಮಂಪರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತಡೆಬೇಲಿಗೆ ಕಾರು ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಈ ವೇಳೆ ಮಾಹಿತಿ ತಿಳಿದು ತಲಪಾಡಿಯಲ್ಲಿ ಗಸ್ತಲ್ಲಿದ್ದ ಟ್ರಾಫಿಕ್ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಕಬ್ಬಿಣದ ಸಲಾಕೆ ಎಡೆಯಲ್ಲಿ ಸಿಲುಕಿದ್ದ ಫಾತಿಮಾರನ್ನು ಹೊರ ತೆಗೆದಿದ್ದಾರೆ.ಮೂವರನ್ನು ಕೂಡ ಪೊಲೀಸ್ ವಾಹನದಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.ಅಷ್ಟರಲ್ಲಿ ಫಾತಿಮಾ ಸಾವನ್ನಪ್ಪಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!