Friday, June 5, 2026
Homeಕರಾವಳಿಉಡುಪಿಉಡುಪಿ; ಲಾಡ್ಜ್ ನಲ್ಲಿ ತಂಗಿದ್ದ ಮಹಿಳೆ ಸಾವು

ಉಡುಪಿ; ಲಾಡ್ಜ್ ನಲ್ಲಿ ತಂಗಿದ್ದ ಮಹಿಳೆ ಸಾವು

- Advertisement -
- Advertisement -

ಉಡುಪಿ: ಹೋಟೆಲ್ ನಲ್ಲಿ ತಂಗಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಲ್ಲೂರಿನಲ್ಲಿ ನಡೆದಿದೆ.

ಮೃತರನ್ನು ಕೇರಳ ಎರ್ನಾಕುಲಂ ಜಿಲ್ಲೆಯ ಎಲ್ಲೂರು ಗ್ರಾಮದ ನಿವಾಸಿ ಉಷಾ ಕುಮಾರಿ(54) ಎಂಬವರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಉಷಾ ಜ.24ರಂದು ಕುಟುಂಬ ಸಮೇತರಾಗಿ ಕೇರಳದಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದು, ಜ.25ರಂದು ಮಹಾಲಕ್ಷ್ಮೀ ರೆಸಿಡೆನ್ಸಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಉಷಾ ಅವರಿಗೆ ಉಸಿರಾಟದ ಸಮಸ್ಯೆ ಉಲ್ಬಣಿಸಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!